Kannada NewsKarnataka NewsNationalPolitics

*ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ ನೀಡಿದ ಡಿಸಿಎಂ ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಸದಸ್ಯರಿಗೂ ಸೆಪ್ಟೆಂಬರ್ 30ರೊಳಗೆ ಇ-ಕೆವೈಸಿ ಮಾಡಿಸಲು ದಿನಾಂಕ ವಿಸ್ತರಣೆ ಬಗ್ಗೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ

ಸಾಲು ಸಾಲು ರಜೆಗಳು ಹಾಗೂ ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ಎದುರಾಗಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ತಾಂತ್ರಿಕ ದೋಷವಿರುವ ಹಿನ್ನೆಲೆಯಲ್ಲಿ ದಿನಾಂಕ ವಿಸ್ತರಣೆ ಮಾಡುವ ಕುರಿತು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದು.

ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪರಿಷ್ಕರಣೆ ನಡೆಸುತ್ತಿರುವ ಸರ್ಕಾರ, ಈಗ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಯೂ ಸೆಪ್ಟೆಂಬರ್ 30, 2026ರೊಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಆಹಾರ ಇಲಾಖೆ ಸೂಚನೆ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button