Belagavi NewsBelgaum News

*ರಾಜ್ಯದಲ್ಲಿ ಡಿಸಿಎಂ‌ ಹುದ್ದೆ ಖಾಲಿ ಇಲ್ಲ: ಸಚಿವ ಚಲುವರಾಯಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡಿಸಿಎಂ‌ ಹುದ್ದೆ ಖಾಲಿ ಇಲ್ಲ. ನಾನು ಯಾರ ಪರವೂ ಇಲ್ಲಾ, ಯಾರ ವಿರೋಧವೂ ಇಲ್ಲ. ಡಿಸಿಎಂ ಸ್ಥಾನ ಖಾಲಿ ಇಲ್ಲ ಖಾಲಿ ಇದ್ದಾಗ ಹೈಕಮಾಂಡ್ ನೋಡುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ನಮ್ಮದು ಜಾತ್ಯಾತೀತ ನಿಲುವು ಇರುವ ಪಕ್ಷ ಕಾಂಗ್ರೆಸ್. ವೈಯಕ್ತಿಕವಾಗಿ ಕೆಲವರು ಮಾತಾಡಿದ್ದಾರೆ ಪಕ್ಷ ತೀರ್ಮಾನ ಮಾಡುತ್ತದೆ. ಪಕ್ಷದ ಜವಾಬ್ದಾರಿ ಅಧ್ಯಕ್ಷರು, ಮುಖ್ಯಮಂತ್ರಿ ಇದಾರೆ ನೋಡಿಕೊಳ್ಳುತ್ತಾರೆ. ಡಿಸಿಎಂ ಚರ್ಚೆ ವಿಚಾರದ ಕುರಿತು ನಾನು ಮಾತಾಡಲ್ಲ ಎಂದರು.

ಚನ್ನಪಟ್ಟಣದಲ್ಲಿ ಡಿ.ಕೆ ಶಿವಕುಮಾರ್ ವಾಸ್ತವ್ಯ ವಿಚಾರಕ್ಕೆ ಉತ್ತರಿಸಿದ ಅವರು, ಅಧ್ಯಕ್ಷರು ನೋಡಿಕೊಳ್ಳುತ್ತಿದ್ದಾರೆ. ಚನ್ನಪಟ್ಟಣಕ್ಕೆ ಯಾವಾಗ ಬೇಕಾದರೂ ಚುನಾವಣೆ ಘೋಷಣೆ ಆಗಬಹುದು. ಡಿಕೆಶಿ ಅಥವಾ ಡಿ.ಕೆ ಸುರೇಶ್ ಯಾರು ಅಂತಾ ತೀರ್ಮಾನ ಆಗಿಲ್ಲ. ಈ ಬಗ್ಗೆ ಸಿಎಂ, ಡಿಸಿಎಂ ಕುಳಿತು ಚರ್ಚೆ ಮಾಡುತ್ತಾರೆ ಎಂದರು.

ಮಂಡ್ಯದಲ್ಲಿ ನನ್ನ ಸೋಲಿಸಲು ಯತ್ನಿಸಿದ್ರೂ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಉತ್ತರಿಸಿದ ಅವರು, ನಮ್ಮನ್ನ ಸೋಲಿಸಲು ನೋಡಿದರೂ ಆಗ ನಾವು ಗೆದ್ದೇವು. ನಾನು ಜೆಡಿಎಸ್ ನಲ್ಲಿ ಇಲ್ಲಾ ನಮ್ಮ ಪಕ್ಷದ ಪರವಾಗಿ ಕೆಲಸ ಮಾಡಬೇಕು. ನಮ್ಮ ಅಭ್ಯರ್ಥಿ ಗೆಲ್ಲಿಸಲು ಕೆಲಸ ಮಾಡಿದ್ದೇವೆ. ಕುಮಾರಸ್ವಾಮಿ ಅವರು ಕೆಲಸ ಮಾಡಲಿ ಒಂದು ವರ್ಷ ಎನೂ ಮಾತಾಡಲ್ಲ. ಕುಮಾರಸ್ವಾಮಿ ಹೊಸದಾಗಿ ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ತಂದೆ ಮಾಡಲು ಆಗದ ಕೆಲಸ ಮಾಡುತ್ತೇನೆ ಎಂದು ಭರವಸೆ ಕೊಟ್ಟಿದ್ದಾರೆ. ಅವರು ಕೆಲಸ ಮಾಡಿದರೆ ನಾನು ಹೆಚ್ಚು ಖುಷಿ ಪಡುತ್ತೇನೆ .ಈಗ ಕುಮಾರಸ್ವಾಮಿ ಬಗ್ಗೆ ಟೀಕೆ ಟಿಪ್ಪಣಿ ಮಾಡಲ್ಲ ಎಂದರು.

ದೇವೆಗೌಡರ ಕುಟುಂಬದ ಬಗ್ಗೆ ವೈಯಕ್ತಿಕವಾಗಿ ಮಾತಾಡಿಲ್ಲ. ಕೋರ್ಟ್ ಅದರ ಬಗ್ಗೆ ತೀರ್ಮಾನ ಮಾಡುತ್ತದೆ. ಕುಮಾರಸ್ವಾಮಿ ಅವರು ಡಿವೈಡ್ ಆಗಿದ್ದೇವೆ ಅಂತಾ ಹೇಳ್ತಿದ್ದಾರೆ. ಆದರೆ ಹೀಗಾಗಬಾರದಿತ್ತು ಅದನ್ನ ಕಾನೂನು ನೋಡುತ್ತದೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button