Belagavi NewsBelgaum NewsCrimeKannada NewsKarnataka News
*ಡಿಸಿಎಂ ಕಾರ್ಯದರ್ಶಿ ಕಾರು ಅಪಘಾತ: ಬೈಕ್ ಸವಾರ ಗಂಭೀರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸವದತ್ತಿ ಬಳಿ ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಅವರ ಕಾರು ಮತ್ತು ಬೈಕು ನಡುವೆ ಅಪಘಾತ ಸಂಭವಿಸಿದೆ.
ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜೇಂದ್ರ ಪ್ರಸಾದ್ ಅವರಿಗೆ ಕೂಡ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ಪಿ ಭೀಮಾ ಶಂಕರ ಗುಳೇದ ತಿಳಿಸಿದ್ದಾರೆ.



