ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು

ಪ್ರಗತಿವಾಹಿನಿ ಸುದ್ದಿ, ಚಿತ್ರದುರ್ಗ: ಪಂಕ್ಚರ್ ಆಗಿದ್ದ ಲಾರಿಗೆ ಪಂಕ್ಚರ್ ಹಾಕುತ್ತಿದ್ದ ಐವರ ಮೇಲೆ ಟ್ಯಾಂಕರ್ ಹಾಯ್ದು ನಾಲ್ವರು ಸಾವಿಗೀಡಾಗಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾನೆ.

ಮೃತರಲ್ಲಿ ಓರ್ವ ರೈತನೂ ಸೇರಿದ್ದು, ಆತ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಮಾರಲು ಹೊರಟಿದ್ದ.

ಚಿತ್ರದುರ್ಗದ ಬಳಿ ಹೋಗುತ್ತಿದ್ದಾಗ ಲಾರಿ ಪಂಕ್ಚರ್ ಆಗಿದೆ. ಲಾರಿಯನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿಕೊಂಡು ಪಂಕ್ಚರ್ ತೆಗೆಯುವ ಕೆಲಸ ಮಾಡುತ್ತಿದ್ದರು. ಆ ವೇಳೆ ಬಂದ ಟ್ಯಾಂಕರ್ ಐವರ ಮೇಲೂ ಹರಿದಿದೆ. ಈರುಳ್ಳಿ ಮಾರಲು ರೋಣ ತಾಲೂಕಿನ ಅರಹುಣಸಿಯಿಂದ ಬೆಂಗಳೂರಿಗೆ ಹೊರಟಿದ್ದ ರೈತ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವಿಗೀಡಾದರೆ ಓರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ರೋಣ ತಾಲೂಕಿನ ಅರಹುಣಸಿಯ ರೈತ ಶರಣಪ್ಪ ಅಳಗುಂಡಿ, ವಿಜಯಪುರದ ಲಾರಿ ಕ್ಲೀನರ್ ಸಂಜಯ್, ಲಿಂಗಸೂಗುರು ತಾಲೂಕಿನ ಬಯಲುಗುಡ್ಡದ ಹುಲಗಪ್ಪ ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೆನಕನಾಳ ದ ಲಾರಿ ಚಾಲಕ ಮಂಜುನಾಥ್ ಬಾದವಾಡಗಿ.

Home add -Advt

ರಾಯಬಾಗದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ; ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಸೇರಿದಂತೆ ಹಲವರ ಉಪಸ್ಥಿತಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button