ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಸರ್ಕಾರಿ ನೌಕರರ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ತುಟ್ಟಿ ಭತ್ಯೆ ಹೆಚ್ಚಳಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಈ ಕುರಿತು ಶೀಘ್ರದಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಆಜಾನ್ ಮಾತ್ರವಲ್ಲ, ಬಸ್ ಗಳಿಗೂ ಶಬ್ಧಮಿತಿ ಆದೇಶವಿದೆ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ