ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬದವರು ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಹೊನ್ನಿಹಾಳ ಗ್ರಾಮದ ಸುನೀತಾ ಎಂಬ ಗರ್ಭಿಣಿಯನ್ನು ವಾರದ ಹಿಂದೆ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಲ್ಲಿನ ವೈದ್ಯರು ಅವಳತ್ತ ಲಕ್ಷ್ಯವನ್ನೇ ನೀಡಿಲ್ಲ. ಸಿಜೇರಿಯನ್ ಮಾಡಿ ಎಂದು ಅಂಗಲಾಚಿದರೂ ವೈದ್ಯರು ಕೇಳಿಲ್ಲ ಎಂಬುದು ಕುಟುಂಬದವರ ಆರೋಪ.
“ಸ್ಕ್ಯಾನಿಂಗ್ ಕೂಡ ಹೊರಗಿನಿಂದ ಮಾಡಿಸಿಕೊಂಡು ಬರಲು ಹೇಳಿದರು. ನಾರ್ಮಲ್ ಹೆರಿಗೆಯಾಗುವ ವಿಶ್ವಾಸದಲ್ಲಿ ನಾವಿದ್ದೆವು. ಆದರೆ ವೈದ್ಯರ ನಿರ್ಲಕ್ಷ್ಯದಿಂದ ದುರಂತವೇ ಆಗಿದೆ. ಸರಕಾರ ನೀಡುವ ಸೌಲಭ್ಯ ಇದೇನಾ?” ಎಂದು ಮಹಿಳೆಯ ಸಂಬಂಧಿಗಳು ಆಕ್ರೋಶದಿಂದ ಕೂಗಾಡಿದರು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪಾಲಕರನ್ನು ಸಮಾಧಾನಪಡಿಸಿದ್ದಾರೆ.
ಮನುಷ್ಯ ಬದುಕಿದ್ದಾಗ ಯಾರಾದ್ರೂ ಉತ್ಸವ ಮಾಡ್ತಾರಾ?; ಸಿದ್ದರಾಮೋತ್ಸವಕ್ಕೆ ತಿರುಗೇಟು ನೀಡಿದ ಸಚಿವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ