Belagavi NewsBelgaum NewsKannada NewsKarnataka NewsLatest

*ಬೆಳಗಾವಿ ಸಮಾವೇಶದಲ್ಲಿ ಸಾವು: ಪರಿಹಾರ ಘೋಷಿಸಿದ ಡಿ ಕೆ ಶಿವಕುಮಾರ್*

ಬೆಳಗಾವಿ ಸಮಾವೇಶದಲ್ಲಿ ಮೃತಪಟ್ಟ ಕೆಂಚಪ್ಪ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಡಿಸಿಎಂ ಡಿ ಕೆ ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :

ಬೆಳಗಾವಿಯ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಅವರ ಕುಟುಂಬಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಬೆಳಗಾವಿಯಲ್ಲಿ ಜನವರಿ 21 ರಂದು ನಡೆದ ಸಮಾವೇಶದಲ್ಲಿ ಸುಮಾರು 60 ವರ್ಷ ವಯಸ್ಸಿನ ಕೆಂಚಪ್ಪ ಅವರು ಕುಸಿದು ಬಿದ್ದು ಮೃತಪಟ್ಟಿದ್ದರು.

ಕೆಂಚಪ್ಪ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಡಿ ಕೆ ಶಿವಕುಮಾರ್ ಅವರು, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ ಭಗವಂತ ನೀಡಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button