Kannada NewsKarnataka NewsLatest
ಬೆಳಗಾವಿ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ಸಾವು; ಖಾನಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಘಟನೆ
ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿದ್ದ ಗರ್ಭಿಣಿಯೋರ್ವರು ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಬಳಿಕ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ತಾಲ್ಲೂಕಿನ ಗಂಗವಾಳಿ ಗ್ರಾಮದ ನಿವಾಸಿ ಉಜ್ವಲಾ ಅರುಣ ಶಿಂಧೆ (24) ಮೃತ ದುರ್ದೈವಿ.
ತೀವ್ರ ಹೆರಿಗೆ ನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಉಜ್ವಲಾ ಆರೋಗ್ಯ ಪರೀಕ್ಷಿಸಿದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಆಕೆಯ ಹೊಟ್ಟೆಯಲ್ಲಿ ಅವಳಿ ಮಕ್ಕಳಿರುವುದನ್ನು ಗಮನಿಸಿ ಕೂಡಲೇ ಹೆರಿಗೆ ಮಾಡಿಸಿದ್ದರು.
ಹೆರಿಗೆಯ ಬಳಿಕ ನವಜಾತ ಶಿಶುಗಳನ್ನು ಪರೀಕ್ಷಿಸಿದ ವೈದ್ಯರು ಅವು ಸಮರ್ಪಕವಾಗಿ ಬೆಳವಣಿಗೆ ಹೊಂದಿರದ ಕಾರಣ ಅವುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲು ಅಂಬುಲನ್ಸ್ ಮೂಲಕ ಕಳಿಸಿಕೊಟ್ಟಿದ್ದರು.
ಇತ್ತ ಹೆರಿಗೆ ಸಮಯದಲ್ಲಿ ರಕ್ತಸ್ರಾವದಿಂದ ನಿತ್ರಾಣಗೊಂಡಿದ್ದ ಬಾಣಂತಿಯೂ ಹೃದಯಾಘಾತಕ್ಕೀಡಾಗಿ ಮೃತಪಟ್ಟರು.
ನವಜಾತ ಶಿಶುಗಳು ಆರೋಗ್ಯದಿಂದಿದ್ದು, ಚೇತರಿಸಿಕೊಳ್ಳುತ್ತಿವೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಖಾನಾಪುರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ