ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿ ಪ್ರಧಾನಿ ಮೋದಿ ಮಾತು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದು, ಇಡೀ ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ.

ಈ ಬಗ್ಗೆ ಪ್ರಧಾನಿಗಳ ಕಾರ್ಯಾಲಯ ಟ್ವೀಟ್ ಮಾಡಿದ್ದು, ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಹೇಳಿದೆ.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಹೇರಲಾಗಿದ್ದ ಲಾಕ್ ಡೌನ್ ಬಗ್ಗೆ ಹಾಗೂ ಕೊರೊನಾ ಜತೆಗೆ ಜೀವನ ಶೈಲಿ ಕುರಿತಾಗಿ ಮಾತನಾಡಲಿದ್ದಾರೆ. ಇದರ ಜತೆಗೆ ಆರ್ಥಿಕ ಪ್ಯಾಕೆಜ್ ಬಗ್ಗೆ ಪ್ರಧಾನಿ ಮಾತನಾಡಲಿದ್ದಾರಾ ಎಂಬ ಕುತೂಹಲ ಕೂಡ ಇದೆ.

ನಿನ್ನೆಯಷ್ಟೇ ಪ್ರಧಾನಿ ಮೋದಿಯವರು ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದರು. ಈ ವೇಳೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಆಯಾ ರಾಜ್ಯಗಳೇ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದ್ದರು.

Home add -Advt

Related Articles

Back to top button