ಪ್ರಗತಿವಾಹಿನಿ ಸುದ್ದಿ: ಹಜ್ ಯಾತ್ರೆಗೆ ತೆರಳಿದ್ದವರ ಪೈಕಿ 640ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ 90ಕ್ಕೂ ಹೆಚ್ಚು ಮಂದಿ ಭಾರತೀಯರೇ ಆಗಿದ್ದು, ಇನ್ನೂ ಹಲವರು ನಾಪತ್ತೆಯಾಗಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಮಾಹಿತಿ ಪ್ರಕಾರ, ನೋಂದಣಿ ಮಾಡಿಸದವರಿಗೆ ವಸತಿ ಸೌಲಭ್ಯ ಸಿಕ್ಕಿರಲಿಲ್ಲ. ಪರಿಣಾಮ ಬಿಸಿಲಿನ ತಾಪಮಾನಕ್ಕೆ ಸಿಲುಕಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಇನ್ನು ಮೃತರ ಪೈಕಿ ಭಾರತ, ಈಜಿಪ್ಟ್ ಮತ್ತು ಜೋರ್ದಾನ್ ದೇಶಕ್ಕೆ ಸೇರಿದವರೇ ಹೆಚ್ಚಿದ್ದಾರೆ ಎನ್ನಲಾಗಿದೆ. ಭಾರತ ಸರ್ಕಾರದ ವತಿಯಿಂದಲೇ ಪ್ರತೀ ವರ್ಷ ಇಂತಿಷ್ಟು ಮಂದಿ ಎಂಬಂತೆ ಈ ಪವಿತ್ರ ಹಜ್ ಯಾತ್ರೆಗೆ ಕಳುಹಿಸಿಕೊಡಲಾಗುತ್ತದೆ. ಆದರೆ 90 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಇನ್ನು ಸಾವಿನ ಸಂಖ್ಯೆ ಹೆಚ್ಚುವ ಸಾದ್ಯತೆಗಳಿಗೆ ಎಂದು ತಿಳಿದು ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ