Belagavi NewsBelgaum NewsKannada NewsKarnataka NewsLatest

*ಬೆಳಗಾವಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು: ಡಾ.ಸೋನಾಲಿ ಸರ್ನೋಬತ್ ಕಳವಳ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ 20 ವರ್ಷದ ವೈಶಾಲಿ ಕೊಟಬಾಗಿ ಎನ್ನುವ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿ ಸಾವನ್ನಪ್ಪಿದ್ದು, ಸರಕಾರ ಕೂಡಲೆ ಎಚ್ಚೆತ್ತುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಆಗ್ರಹಿಸಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ಹಾಗೂ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಆರೋಪಿಸಿರುವ ಅವರು, ಬಿಜೆಪಿ ಮಹಿಳಾ ಮೋರ್ಚಾ ಇದನ್ನು ಖಂಡಿಸುತ್ತದೆ. ಕೂಡಲೇ ಆರೋಗ್ಯ ಸಚಿವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಸರಿಯಾದ ಆರೈಕೆ ಮತ್ತು ಆರೋಗ್ಯ ರಕ್ಷಣೆಯಿಲ್ಲದೆ ಬಾಣಂತಿಯರು ಸಾಯುತ್ತಿರುವುದು ನಿಜವಾದ ಸಮಸ್ಯೆಯಾಗಿದೆ ಮತ್ತು ಅದನ್ನು ಪರಿಹರಿಸಬೇಕಾಗಿದೆ. ಇತ್ತೀಚೆಗಷ್ಟೇ ನಾವು ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಈ ವಿಷಯದ ಬಗ್ಗೆ ಪ್ರತಿಭಟನೆ ನಡೆಸಿದ್ದರೂ ಸಾವು ಮುಂದುವರಿದಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button