*ಮೈಸೂರಿನ ಅರಮನೆ ಮುಂದೆ ನಡೆದ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಅರಮನೆ ಮುಂದೆ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಳೆ. ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಮೃತರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ನಿವಾಸಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಕ್ರಿಸ್ ಮಸ್ ರಜೆಯ ಹಿನ್ನಲೆ ಲಕ್ಷ್ಮಿ ಅವರ ಕುಟುಂಬ ಮೈಸೂರಿಗೆ ಆಗಮಿಸಿದ್ದರು. ರಜೆಯ ಹಿನ್ನಲೆ ಸಾಮಾನ್ಯ ದಿನಕ್ಕಿಂತ ಹೆಚ್ಚಿನ ಜನ ಅರಮನೆ ವೀಕ್ಷಿಸಲು ಆಗಮಿಸಿದ್ದರು.
ಅದರಂತೆ, ಗುರುವಾರ ರಾತ್ರಿ ಸುಮಾರು 8.30ರ ವೇಳೆಗೆ ಉತ್ತರ ಪ್ರದೇಶದ ಸಲೀಂ ಎಂಬವರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಹೀಲಿಯಂ ಬಲೂನ್‌ಗಳನ್ನು ಮಾರಾಟ ಮಾಡುತ್ತಿದ್ದರು. ಬಲೂನ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದ ಸಂದರ್ಭದಲ್ಲೇ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ.
ಸ್ಫೋಟಕ ತೀವ್ರತೆಗೆ ಬಲೂನ್ ಬರುತ್ತಿದ್ದ ಸಲೀಂ ಸ್ಥಳದಲ್ಲೇ ಸಾವನ್ನಪ್ಪಿದ್ದ ಇದೀಗ ಮೈಸೂರಿನಲ್ಲಿ ನಡೆದ ಹಿಲಿಯಂ ಸಿಲಿಂಡರ್ ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಿಯನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇನ್ನು ಘಟನೆಯಲ್ಲಿ ಲಕ್ಷ್ಮೀ ಅವರ ಮಗಳು ಡಿಂಪಲ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಪುತ್ರಿ ಕಣ್ಣೀರಿಟ್ಟಿರುವ ದೃಶ್ಯಗಳು ಮನಕಲಕುವಂತಿವೆ.
ಮೈಸೂರಿನಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದ ಮಂಜುಳ ಅವರು ವ್ಯಾಪಾರ ಮುಗಿಸಿಕೊಂಡು ಬಸ್ ಹತ್ತಲು ತೆರಳುತ್ತಿದ್ದ ಸಂದರ್ಭದಲ್ಲೇ ಸಂಭವಿಸಿದ ಸಿಲಿಂಡರ್ ಸ್ಫೋಟಕ್ಕೆ ಗುರಿಯಾಗಿದ್ದರು. ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.


