ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಕೋವಿಡ್-೧೯ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಘಟಕವು ಸೋಂಕಿತರ ನೆರವಿಗೆ ನಿಂತಿರುವುದು, ಜನಕಲ್ಯಾಣ ಟ್ರಸ್ಟ್‌ದೊಂದಿಗೆ ಕೋವಿಡ್ ಕೇರ್ ಸೆಂಟರ್ ನಡೆಸುವ ಉಪಕ್ರಮದಲ್ಲಿ ಭಾಗಿಯಾಗಿರುವುದಲ್ಲದೆ ವಿಶ್ವವಿದ್ಯಾಲಯದ ದೀನದಯಾಳ ಅಧ್ಯಯನ ಪೀಠದ ವತಿಯಿಂದ ಮೂರು ದತ್ತು ಗ್ರಾಮಗಳಲ್ಲಿ ಆಹಾರ ಕಿಟ್‌ಗಳನ್ನು ವಿತರಿಸುವುದರ ಮೂಲಕ ತನ್ನ ಕಾಳಜಿಯನ್ನು ವ್ಯಕ್ತಪಡಿಸಿದೆ.
ಅಲ್ಲದೆ, ವಿಶ್ವವಿದ್ಯಾಲಯದ ಅಧ್ಯಾಪಕರುಗಳು ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಎನ್ನುವ ನೀತಿ ಅಡಿಯಲ್ಲಿ ಕ್ರಮಬದ್ಧವಾಗಿ ವೇಳಾಪಟ್ಟಿಯನ್ನು ರೂಪಿಸಿಕೊಂಡು ಆನ್‌ಲೈನ್ ಮೂಲಕ ವಿದ್ಯಾರ್ಥಿಗಳು ಪಾಠವನ್ನು ಕೇಳಬಹುದಾದ ವ್ಯವಸ್ಥೆಯನ್ನು ಮಾಡಿದೆ.
ಮುಂದುವರಿದ ಭಾಗವಾಗಿ ಪ್ರಸ್ತುತ ವಿಶ್ವವಿದ್ಯಾಲಯವು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕೋವಿಡ್-೧೯ ಸಾಂಕ್ರಾಮಿಕ ರೋಗದಿಂದ ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡ ಮಕ್ಕಳಿಗೆ ಬರುವ ಶೈಕ್ಷಣಿಕ ವರ್ಷದಿಂದ ಮತ್ತು ಈಗಾಗಲೇ ಅಧ್ಯಯನ ಕೈಗೊಂಡಿರುವ ವಿದ್ಯಾರ್ಥಿಗಳಿಗೂ ಕೂಡ ಶುಲ್ಕ ವಿನಾಯಿತಿಯನ್ನು ನೀಡಲಿದೆ ಎಂದು ಕುಲಪತಿ ಪ್ರೊ. ಎಂ. ರಾಮಚಂದ್ರಗೌಡ ತಿಳಿಸಿದ್ದಾರೆ.
2 ದಿನದಲ್ಲಿ ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಪ್ರಕಟ; ಕೆಲವು ಶಿಕ್ಷಕರಿಗೆ ವರ್ಕ್ ಫ್ರಾಂ ಹೋಮ್ ಸೌಲಭ್ಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ