
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಬಿಬಿಎಂಪಿ ದಕ್ಷಿಣ ವಲಯದ ಕೋವಿದ್ ವಾರ್ ರೂಂ ಉಸ್ತುವಾರಿ ಡಾ.ರೆಹಾನ್, ನೇತ್ರಾವತಿ ಹಾಗೂ ಇತರ 6 ಜನರು ಎಂದು ತಿಳಿದುಬಂದಿದೆ. ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಸಂಬಂಧ ಬೆಂಗಳೂರು ಜಯನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ವಾರ್ ರೂಂ ಮೇಲೆ ದಾಳಿ ನಡೆಸಿದ ಪೊಲೀಸರು ವೈದ್ಯರು ಸೇರಿ 8 ಜನರನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳು 2 ಬೆಡ್ ಗಾಗಿ ತಲಾ 40,000 ರೂ ನಂತೆ ಮೂರು ಬೆಡ್ ಗಾಗಿ ಒಟ್ಟು 1.7 ಲಕ್ಷ ರು ಹಣ ವಸೂಲಿ ಮಾಡಿದ್ದರು ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳ ಸಿಎಂ ಆಗಿ ದೀದಿ ಮೂರನೇ ಬಾರಿ ಪ್ರಮಾಣವಚನ