Latest

ನಟ ದೀಪ್ ಸಿಧುಗೆ ಜಾಮೀನು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ದೆಹಲಿಯಲ್ಲಿ ಹಿಂಸಾಚಾರ ನಡೆಸಿ, ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಜನವರಿ 26ರಂದು ಹಿಂಸಾಚಾರಕ್ಕೆ ತಿರುಗಿತ್ತು. ನಟ ದೀಪ್ ಸಿಧು ಕೆಂಪು ಕೋಟೆಯ ಮೇಲೆ ಸಿಖ್ ಧ್ವಜ ಹಾರಿಸಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಫೆಬ್ರವರಿಯಲ್ಲಿ ಅವರನ್ನು ಬಂಧಿಸಲಾಗಿತ್ತು.

Home add -Advt

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ದೀಪ್ ಸಿಧುಗೆ ಜಾಮೀನು ನೀಡಿದೆ.
ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು

Related Articles

Back to top button