Latest

ಎಫ್ ಐಆರ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾದ ದೀಪ್ ಸಿಧು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣ ಹಾಗೂ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನಟ ದೀಪ್ ಸಿಧು ವಿರುದ್ಧ ಎಫ್ಐಆರ್ ದಾಖಲಾಗಿದೆ.

ತನ್ನ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ನಟ ದೀಪ್ ಸಿಧು ನಾಪತ್ತೆಯಾಗಿದ್ದಾರೆ. ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಸಂಘಟನೆಗಳು ದೀಪ್ ಸಿಧು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ದೀಪ್ ಸಿಧು ವಿರುದ್ಧ ಪ್ರಕರಣ ದಾಖಲಾಗಿದೆ.

Related Articles

ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ಆರೋಪದಲ್ಲಿ ಹಾಗೂ ಪ್ರಾಚೀನ ಸ್ಮಾರಕ ಹಾಗೂ ಪುರಾತತ್ವ ಸ್ಥಳಗಳು, ಅವಶೆಷಗಳ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆ ನಿಬಂಧನೆಗಳಡಿಯಲ್ಲಿ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದೀಪ್ ಸಿಧು ವಿರುದ್ಧ ಐಪಿಸಿ ಸೆಕ್ಷನ್ 186, 353, 308, 152, 397 ಹಾಗೂ 307 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button