Belagavi NewsBelgaum NewsKannada NewsKarnataka NewsNationalPolitics

*ಸಿದ್ದರಾಮಯ್ಯ ಅವರು ನಾಳೆ 3 ಗಂಟೆ ಬಳಿಕ ರಾಜೀನಾಮೆ ನೀಡಲಿದ್ದಾರೆ: ಅಶೋಕ ಪಟ್ಟಣ*

ಪ್ರಗತಿವಾಹಿನಿ ಸುದ್ದಿ: ನಾಳೆ ಮಧ್ಯಾಹ್ನ 3 ಗಂಟೆಯ ಬಳಿಕ ಮುಖ್ಯಮಂತ್ರಿಯವರು ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ” ಎಂದು ಹೇಳುವ ಮೂಲಕ ಹಿರಿಯ ಕಾಂಗ್ರೆಸ್ ಶಾಸಕ ಅಶೋಕ್ ಎಂ. ಪಟ್ಟಣ್ ಅವರು ಕಾಂಗ್ರೆಸ್ ಪಾಳಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ ಬಳಿಕ ಮಾತನಾಡಿದ ಅವರು, ನಾವು ಈಗಷ್ಟೇ ಸಿಎಂ ನಿವಾಸಕ್ಕೆ ಹೋಗಿ ಬಂದಿದ್ದೇವೆ. ನಾಳೆ ಮಧ್ಯಾಹ್ನ 3 ಗಂಟೆಯ ನಂತರ ಮುಖ್ಯಮಂತ್ರಿಯವರು ರಾಜೀನಾಮೆ ನೀಡಲಿದ್ದಾರೆ ಎಂದು ನಾನು ಭಾವಿಸುತ್ತೇನೆ. ಈ ಸಂಬಂಧ ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯಪಾಲರನ್ನು ಭೇಟಿಯಾಗಲು ಅಧಿಕೃತ ಸಮಯ ನಿಗದಿಪಡಿಸಿಕೊಂಡಿದ್ದಾರೆ,” ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ.

Home add -Advt

ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು “ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ. ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬೆಂಗಳೂರಿನಲ್ಲೇ ಇದ್ದಾರೆ. ಆದರೆ, ಬಹುತೇಕ ಡಿ.ಕೆ. ಶಿವಕುಮಾ‌ರ್ ಅವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಹೈಕಮಾಂಡ್ ಏನೇ ನಿರ್ಧಾರ ಕೈಗೊಂಡರೂ ರಾಜ್ಯದ ನಾಯಕರೆಲ್ಲರೂ ಅದಕ್ಕೆ ಬದ್ಧರಾಗಿರುತ್ತಾರೆ” ಎಂದರು

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗುತ್ತಿದ್ದಂತೆ ಹೊಸ ಸಚಿವ ಸಂಪುಟ ರಚನೆಯಾಗುವ ಮುನ್ಸೂಚನೆಯನ್ನೂ ಪಟ್ಟಣ್ ನೀಡಿದ್ದಾರೆ. “ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಹುದ್ದೆ ಸ್ವೀಕರಿಸಲು ಸಿದ್ದನಿದ್ದೇನೆ. ಆದರೆ ಮೊದಲು ಅವರು ನನಗೆ ಸಚಿವ ಸ್ಥಾನ ನೀಡಬೇಕಲ್ಲ. ಅದೇ ಇಲ್ಲಿರುವ ದೊಡ್ಡ ಪ್ರಶ್ನೆ. ಆದರೆ ಹೊಸ ಸಚಿವ ಸಂಪುಟದಲ್ಲಿ ನನಗೂ ಸ್ಥಾನ ಸಿಗಲಿದೆ ಎಂಬ ಬಲವಾದ ನಂಬಿಕೆ ಮತ್ತು ಆಶಾವಾದ ನನಗಿದೆ,” ಎಂದರು.

Related Articles

Back to top button