Kannada NewsKarnataka NewsLatestPolitics

*ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ರಾಜಕೀಯ ಪಕ್ಷ ಸೇರ್ಪಡೆ ಕಾರ್ಯಕ್ರಮವೂ ಬಿರುಸು ಪಡೆದುಕೊಂಡಿದೆ. ಹಿರಿಯ ಪತ್ರಕರ್ತ, ನಿರೂಪಕ ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

Home add -Advt

ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ದೀಪಕ್ ತಿಮ್ಮಯ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದೆಸಿ, ಹೂಗುಚ್ಛ ನೀಡಿ ಪಕ್ಷಕ್ಕೆ ಬರಮಾಡಿಕೊಂಡ ಡಿ.ಕೆ. ಶಿವಕುಮಾರ್ ಅವರು ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಕಚೇರಿ ನೀಡಲಾಗುವುದು. ಪಕ್ಷದ ವಿಚಾರವಾಗಿ ಯಾರೇ ನನ್ನನ್ನು ಸಂಪರ್ಕ ಮಾಡಲು ಅವರು ಸಹಕಾರ ನೀಡಲಿದ್ದಾರೆ.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ ಅವರು ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಾಯಕರನ್ನು ಸೃಷ್ಟಿಸುವವನು ನಾಯಕನೇ ಹೊರತು ಹಿಂಬಾಲಕರನ್ನು ಸೃಷ್ಟಿಸುವವನು ಅಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ನನಗೆ ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಮನವಿ ಮಾಡಿದ್ದೆ. ಅದನ್ನು ಒಪ್ಪಿ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಆಗಿದ್ದು, ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಾರೆ ಎಂದರು.

Related Articles

Back to top button