
ಪ್ರಗತಿವಾಹಿನಿ ಸುದ್ದಿ: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಅವಘಡದಲ್ಲಿ 32 ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಹಬ್ಬದ ಮೊದಲ ದಿನವೇ ಸಾಲು ಸಾಲು ಪಟಾಕಿ ದುರಂತಗಳು ಸಂಭವಿಸಿದ್ದು, ಬೆಂಗಳೂರಲ್ಲಿ ಮಕ್ಕಳು ಮತ್ತು ವಯಸ್ಕರು ಸೇರಿ ಒಟ್ಟು 32 ಜನರು ಗಾಯಗೊಂಡಿದ್ದಾರೆ.
ಈ ಪೈಕಿ ನಾರಾಯಣ ನೇತ್ರಾಲಯದಲ್ಲಿ 20 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಒಂಬತ್ತು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಇಬ್ಬರು ಮತ್ತು ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ ಓರ್ವ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಪ್ರತಿ ವರ್ಷವೂ ಇಂತಹ ಪಟಾಕಿ ದುರಂತಗಳು ಸಂಭವಿಸುತ್ತಲೇ ಇರುತ್ತವೆ. ಪಟಾಕಿ ಸಿಡಿಸುವಾಗ ಸುರಕ್ಷತಾ ಕ್ರಮಗಳನ್ನು ಪಾಲಿಸುವುದು ಕಡ್ಡಾಯ ಎಂದು ತಿಳಿಸಿದರೂ ಅವಘಡಗಳಿಂದ ಗಾಯ ಮಾಡಿಕೊಳ್ಳುವುದು ಮಾತ್ರ ನಿಲ್ಲುತ್ತಿಲ್ಲ.




