*ದೀಪಾವಳಿ ಹಬ್ಬಕ್ಕೆ ಕಠಿಣ ನಿಯಮ*: *ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಬೆಳಕಿನ ಹಬ್ಬ ದೀಪಾವಳಿಗೆ ಭರ್ಜರಿ ಸಿದ್ಧತೆಗಳು ಆರಂಭವಾಗಿವೆ. ಈ ನಡುವೆ ದೀಪಾವಳಿ ಹಬ್ಬದಲ್ಲಿ ಪಟಾಕಿಯಿಂದಾಗಿ ವಾಅಯು ಹಾಅಗೂ ಶಬ್ಧ ಮಾಲಿನ್ಯ ಹೆಚ್ಚಾಗದಂತೆ ತಡೆಯಲು ರಾಜ್ಯ ಸರ್ಕಾರ ಹೊಸ ಮಾರ್ಗ ಸೂಚಿ ಪ್ರಕಟಿಸಿದೆ.
ಸುಪ್ರೀಂ ಕೋರ್ಟ್ ನಿರ್ದೇಶನಗಳನ್ವಯ, ರಾಜ್ಯದಲ್ಲಿ ನವೆಂಬರ್ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಪಟಕಿ ಸಿಡಿಸಲು ಸಮಯಗಳನ್ನು ನಿಗದಿ ಮಾಡಲಾಗಿದೆ. ನಿಯಮವನ್ನು ಕಟ್ತು ನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.
ರಾಜ್ಯದಲ್ಲಿ ನವೆಂಬರ್ 8 ರಿಂದ 10 ರವರೆಗೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಪರಿಸರ ಇಲಾಖೆ ಅಧಿಕಾರಿಗಳ ಉನ್ನತ ಮಟ್ಟದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ನಿಗದಿತ ಸಮಯದ ಹೊರತಾಗಿ ಪಟಾಕಿ ಹೊಡೆಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಈ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ವಿಶೇಷವಾಗಿ ಆಸ್ಪತ್ರೆಗಳು, ಶಾಲೆಗಳು ಹಾಗೂ ಪ್ರಮುಖ ಶ್ರದ್ಧಾ ಕೇಂದ್ರಗಳ ಸುತ್ತಮುತ್ತ ಪಟಾಕಿ ನಿಷೇಧ ಪ್ರದೇಶಗಳನ್ನು ಕಾಯ್ದುಕೊಳ್ಳಲು ತಿಳಿಸಲಾಗಿದೆ
ರಾಜ್ಯದಲ್ಲಿ ಕೇವಲ ಹಸಿರು ಪಟಾಕಿಗಳನ್ನು (Green Crackers) ಮಾತ್ರ ಮಾರಾಟ ಮಾಡಲು ಮತ್ತು ಬಳಸಲು ಅನುಮತಿ ನೀಡಲಾಗಿದೆ. ಗ್ರೀನ್ ಕ್ರಾಕರ್ಸ್ ಬಾಕ್ಸ್ಗಳ ಮೇಲೆ ಕಡ್ಡಾಯವಾಗಿ ಕ್ಯೂಆರ್ ಕೋಡ್ (QR Code) ಇರಬೇಕು. ಈ ಚಿಹ್ನೆ ಇಲ್ಲದ ಪಟಾಕಿಗಳನ್ನು ಮಾರಾಟ ಮಾಡಿದರೆ ಅಥವಾ ಅಕ್ರಮವಾಗಿ ಸಾಗಿಸಿದರೆ ಮುಟ್ಟುಗೋಲು ಹಾಕಿಕೊಳ್ಳುವುದಲ್ಲದೆ, ಸಂಬಂಧಪಟ್ಟವರ ವಿರುದ್ಧ ಕ್ರಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಲಾಗಿದೆ.




