Kannada NewsKarnataka NewsLatest

 ಎಲ್ಲ 15 ಸ್ಥಾನಗಳು ಬಿಜೆಪಿ ಮಡಿಲಿಗೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಗೋಕಾಕ : ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಗೆಲುವು ಖಚಿತ. ಇದರಲ್ಲಿ ಯಾವುದೇ ಸಂಶಯವಿಲ್ಲ. ರಾಜ್ಯದಲ್ಲಿ ಬಿಜೆಪಿ ೧೫ ಸ್ಥಾನಗಳಲ್ಲಿ ಗೆಲ್ಲಲಿದ್ದು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಪೂರೈಸಲಿದ್ದಾರೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಹೊಸಪೇಟ ಗಲ್ಲಿಯಲ್ಲಿರುವ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ನಂ. ೩ ರಲ್ಲಿ ಮತ ಚಲಾಯಿಸಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರು ೬ನೇ ಬಾರಿ ಶಾಸಕರಾಗಿ ಆಯ್ಕೆಯಾಗುವರು. ನಂತರ ಸಚಿವರಾಗಿ ಜಿಲ್ಲೆಯ ಮತ್ತು ಕ್ಷೇತ್ರದ ವಿಕಾಸಕ್ಕೆ ಅವರು ಶ್ರಮಿಸಲಿದ್ದಾರೆ ಎಂದು ಹೇಳಿದರು.

Home add -Advt

ಡಿ. ೯ ರ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಬಿಜೆಪಿ ಈ ಉಪಚುನಾವಣೆಯಲ್ಲಿ ಎಲ್ಲ ೧೫ ರಲ್ಲಿ ಜಯಗಳಿಸುವ ಮೂಲಕ ಉತ್ತಮ ಆಡಳಿತ ನೀಡಲಿದೆ. ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಮುಂದುವರೆಯಲಿದ್ದಾರೆ. ಕರ್ನಾಟಕದ ಎಲ್ಲ ವರ್ಗದ ಜನರು ಆಶೀರ್ವಾದ ಮಾಡಲಿದ್ದಾರೆ. ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು.

ಗೋಕಾಕ ಕ್ಷೇತ್ರಾದ್ಯಂತ ಮತದಾರರು ಬಿಜೆಪಿಯತ್ತ ವಾಲಿದ್ದಾರೆ. ಎಲ್ಲ ವರ್ಗದ ಪ್ರಜ್ಞಾವಂತ ಮತದಾರರು ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿದರು.
ಈ ಉಪ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಪರ ಕೆಲಸ ಮಾಡುತ್ತಿರುವ ಗೋಕಾಕ ಮತ್ತು ಅರಭಾವಿ ಮತಕ್ಷೇತ್ರದ ಸಕಲ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳನ್ನು ಅಭಿನಂದಿಸಿ, ಕೃತಜ್ಞತೆ ಸಲ್ಲಿಸಿದರು.

Related Articles

Back to top button