Latest

ರಾಜ್ಯದ ಹಲವೆಡೆ ಮಳೆ, ಚಳಿ: ಯೆಲ್ಲೋ ಅಲರ್ಟ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಳೆದ 2 -3 ದಿನಗಳಿಂದಲೂ ರಾಜ್ಯದಲ್ಲಿ ಮೋಡ ಕವಿದ ವಾತಾವರಣ, ಚಳಿ ಮತ್ತು ಅಲ್ಲಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿಯಲ್ಲಿ ಮತ್ತು ಕರಾವಳಿಯ ಕೆಲವೆಡೆ ಭಾರಿ ಪ್ರಮಾಣದಲ್ಲೇ ಮಳೆಯಾಗಿದೆ. ಅನೇಕ ಕಡೆ ರೈತರ ಫಸಲು ಕೊಚ್ಚಿ ಹೋಗಿದೆ. ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ನವಿಲುಗುರ್ಕಿ ರಸ್ತೆ ಬಳಿ  ದ್ವಿಚಕ್ರ ವಾಹನದಲ್ಲಿ ಬಂದ ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ನವಿಲಗುರ್ಕಿಯ ಗಂಗಾಧರ್ ಗೌಡ ಎಂಬಾತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಬೆಂಗಳೂರಿನಲ್ಲಿ ಇನ್ನೂ 2 ದಿನ ಮಳೆ, ಚಳಿ ಮುಂದುವರೆಯಲಿದೆ. ತುಮಕೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ,  ಶಿವಮೊಗ್ಗ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ  ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Home add -Advt

ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಳೆಗೆ ರೈತರು ಕಂಗಾಲಾಗಿದ್ದಾರೆ. ಮಲೆನಾಡು ಭಾಗದಲ್ಲಿ ಅಡಕೆ ಕಟಾವು ನಡೆಯುತ್ತಿದ್ದು, ಅಡಕೆ ಒಣಗಿಸಲು ಬಿಸಿಲು ಇಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆದು ನಿಂತ ಭತ್ತ ಕೂಡ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೊಳಗಾಗಿದೆ. ತಕ್ಷಣ ಮಳೆ ನಿಂತು ಬಿಸಿಲು ಬಾರದಿದ್ದರೆ ಬೆಳೆದ ಫಸಲು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತದೆ.

ಚಿನ್ನ, ಬೆಳ್ಳಿ ದರ ಇಂದು ಎಲ್ಲೆಲ್ಲಿ ಎಷ್ಟಿದೆ?

Related Articles

Back to top button