ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಆರಂಭವಾಗಿದ್ದು, ರಾಜಕೀಯ ನಾಯಕರನ್ನೂ ವೈರಸ್ ಬೆಂಬಿಡದೆ ಕಾಡುತ್ತಿದೆ. ಇದೀಗ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಸ್ವತ: ಟ್ವೀಟ್ ಮಾಡಿರುವ ಸಚಿವ ರಾಜನಾಥ್ ಸಿಂಗ್, ಕೋವಿಡ್ ಟೆಸ್ಟ್ ನಲ್ಲಿ ನನಗೆ ಕೊರೊನಾ ಪಾಸಿಟಿವ್ ಬಂದಿದ್ದು, ಕೆಲ ಸೌಮ್ಯ ಲಕ್ಷಗಳು ಕಂಡು ಬಂದಿವೆ. ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿದ್ದ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿ ಹಾಗೂ ಕ್ವಾರಂಟೈನ್ ಆಗುವಂತೆ ಮನವಿ ಮಾಡಿದ್ದಾರೆ.
ಈಗಾಗಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಸಚಿವರು, ಶಾಸಕರು, ಅಧಿಕಾರಿಗಳು ಕೂಡ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಇದೀಗ ರಕ್ಷಣಾ ಸಚಿವರಿಗೂ ಸೋಂಕು ದೃಢಪಟ್ಟಿರುವುದು, ಅವರ ಸಂಪರ್ಕದಲ್ಲಿದ್ದ ಕೇಂದ್ರ ಸಚಿವರು ಹಾಗೂ ಅಧಿಕಾರಿಗಳಿಗೂ ಆತಂಕ ಎದುರಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೂ ಕೊರೊನಾ ಸೋಂಕು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ