ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಖಾಲಿ ಇರುವ 410 ಪ್ರಾಂಶುಪಾಲ ಹುದ್ದೆಗಳಿಗೆ ನೇಮಕಾತಿ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಗ್ರೇಡ್-1 ದರ್ಜೆಯ 327 ಹುದ್ದೆಗಳು ಪದವಿ ಕಾಲೇಜುಗಳಲ್ಲಿ ಹಾಗೂ ಗ್ರೇಡ್-2 ದರ್ಜೆಯ 38 ಹುದ್ದೆಗಳು ಸ್ನಾತಕೋತ್ತರ ಕೋರ್ಸ್ ಇರುವ ಪದವಿ ಕಾಲೇಜುಗಳಲ್ಲಿ ಲಭ್ಯವಿದೆ. ಪ್ರಾಂಶುಪಾಲರ ಹುದ್ದೆ ಖಾಲಿ ಇರುವ ಕಾಲೇಜುಗಳ ವಿವರಗಳನ್ನು ಕೌನ್ಸೆಲಿಂಗ್ ಆರಂಭಿಸುವುದಕ್ಕೂ 15 ದಿನಗಳ ಮೊದಲೇ ಕಾಲೇಜು ಶಿಕ್ಷಣ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಭಾರಿ ನೇಮಕ ಪ್ರಕ್ರಿಯೆಯಲ್ಲಿ ಸೇವಾ ಜೇಷ್ಠತೆ ಆಧಾರದ ಮೇಲೆ ಆಯ್ಕೆ ಶ್ರೇಣಿ ಉಪನ್ಯಾಸಕರು, ಸಹ ಮತ್ತು ಸಹಾಯಕ ಪ್ರಾಧ್ಯಾಪಕರನ್ನು ಮಾತ್ರವೇ ಕೌನ್ಸಿಲಿಂಗ್ ಗೆ ಕರೆಯಲಾಗುವುದು.
ಸರ್ಕಾರಿ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಕೂಡ ಮಾರ್ಚ್ ಹಾಗೂ ಏಪ್ರಿಲ್ ತಿಂಗಳುಗಳಲ್ಲೇ ನಡೆಸಲು ತೀರ್ಮಾನಿಸಲಾಗಿದ್ದು, ಈ ಪ್ರಕ್ರಿಯೆ ಕೂಡ ಕೌನ್ಸೆಲಿಂಗ್ ಮೂಲಕವೇ ನಡೆಯಲಿದೆ ಎಂದು ತಿಳಿಸಿದ್ದಾರೆ.
VTU: ಮೂವರಿಗೆ ಡಾಕ್ಟರೇಟ್ ಗೌರವ, 10 ವಿದ್ಯಾರ್ಥಿಗಳಿಗೆ ಚಿನ್ನದ ಪದಕ; 16 ಪದಕ ಪಡೆದ ಚಿನ್ನದ ಹುಡುಗಿ ಯಾರು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ