![](https://pragativahini.com/wp-content/uploads/2024/08/parameshwar-.jpg)
ಪ್ರಗತಿವಾಹಿನಿ ಸುದ್ದಿ: ದೆಹಲಿ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮೈತ್ರಿ ಎಲ್ಲಾ ಕಾಲದಲ್ಲೂ ಒಂದೇ ರೀತಿ ಇರಲ್ಲ ಎಂದಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ, ಆಮ್ ಆದ್ಮಿ ಪಕ್ಷ ಹಿನ್ನಡೆಯಲ್ಲಿದೆ. ಇನ್ನು ಕಾಂಗ್ರೆಸ್ ಯಾವುದೇ ಖಾತೆ ತೆರೆದಿಲ್ಲ. ಫಲಿತಾಂಶದ ವಿಚಾರವಾಗಿ ಬೆಂಗಲೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸಂಪೂರ್ಣ ರಿಸಲ್ಟ್ ಬರಲಿ ಆಮೇಲೆ ಚರ್ಚಿಸೋಣ ಎಂದರು.
ಮೈತ್ರಿ ಎಲ್ಲಾ ಕಾಲದಲ್ಲೂ ಒಂದೇ ರೀತಿ ಇರುವುದಿಲ್ಲ. ಯಾವ ಕಾರಣಕ್ಕೆ ಹಿನ್ನಡೆಯಾಗಿದೆ ಎಂಬುದನ್ನು ನಂತರ ಚರ್ಚಿಸೋಣ. ಎಐಸಿಸಿ ನಯಕರು ಈ ಬಗ್ಗೆ ಚರ್ಚೆ ಮಾಡುತ್ತಾರೆ. ದೆಹಲಿ ಚುನಾವಣೆಯಲ್ಲಿ ಹಿನ್ನಡೆ ಬೇರೆ ರಾಜ್ಯಗಳ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಒಂದೊಂದು ರಾಜ್ಯಗಳಲ್ಲಿ ಒಂದೊಂದು ರೀತಿ ಇರುತ್ತದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ