Belagavi NewsBelgaum NewsKannada NewsKarnataka NewsPolitics

*ಬೆಳಗಾವಿ-ಧಾರವಾಡ ರೈಲು ಮಾರ್ಗ ವಿಳಂಬ: ಸಂತೋಷ ಲಾಡ್ ವಿರುದ್ಧ ಗಂಭೀರ ಆರೋಪ ಮಾಡಿದ ಸೋಮಣ್ಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಿ. ಸುರೇಶ ಅಂಗಡಿಯವರ ಕನಸಿನ ಯೋಜನೆಯಾದ ಬೆಳಗಾವಿ-ಧಾರವಾಡ ನಡುವಿನ ನೇರ ನೂತನ ರೈಲು ಮಾರ್ಗಕ್ಕೆ ಧಾರವಾಡ ಜಿಲ್ಲೆಯಲ್ಲಿ ಇನ್ನು 45 ಎಕರೆ ಭೂ ಸ್ವಾಧೀನ ಬಾಕಿ ಇದ್ದು, ಇದಕ್ಕೆ ಸಚಿವ ಸಂತೋಷ ಲಾಡ್ ಅವರೆ ಕಾರಣ ಎಂದು ರೈಲ್ವೆ ಸಚಿವ ವಿ ಸೋಮಣ್ಣ ಅವರು ಗಂಭೀರ ಆರೋಪ ಮಾಡಿದ್ದಾರೆ. 

ಬೆಳಗಾವಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಸಂಪೂರ್ಣ ಭೂ ಸ್ವಾಧೀನ ಪ್ರಕ್ರಿಯೆ ಮುಗಿದಿದೆ‌. ಧಾರವಾಡ ಭಾಗದಲ್ಲಿ ಇನ್ನೂ 45 ಎಕರೆ ಜಮೀನು ಸ್ವಾಧೀನ ಮಾಡಿಕೊಳ್ಳಬೇಕು. ಈಗಾಗಲೇ ಎರಡ್ಮೂರು ಬಾರಿ ಮಾತಾಡಿದರು ಸಂತೋಷ ಲಾಡ್ ಸ್ಪಂದನೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಇನ್ನು ರಾಜ್ಯ ಸರ್ಕಾರದ ಸಹಕಾರ ಇಲ್ಲದೇ ಬೆಳಗಾವಿ ಧಾರವಾಡ ನೇರ ರೈಲು ಯೋಜನೆ ವಿಳಂಬವಾಗುತ್ತಿದೆ.‌ ಯೋಜನೆ ವಿಳಂಬಕ್ಕೆ ರಾಜ್ಯ ಸರ್ಕಾರ, ಸಚಿವ ಸಂತೋಷ ಲಾಡ್ ಕಾರಣ.‌ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ಕೂಡ ಮಾತಾಡಿದ್ದಾರೆ. ಇನ್ನೊಂದು ಬಾರಿ ನಾನೇ ಅವರ ಜೊತೆಗೆ ಮಾತನಾಡುತ್ತೇನೆ. ಅವರು ಯಾಕೆ ಹಾಗೇ ಮಾಡ್ತಿದ್ದಾರೆ ಗೊತ್ತಿಲ್ಲ. ಸ್ಪಂದನೆ ಮಾಡದಿದ್ರೇ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಂತೋಷ್ ಲಾಡ್ ಇನ್ನು ಬೆಳೆಯುತ್ತಿರುವವರು. ಯಾಕೆ ಹಾಗೇ ಮಾಡುತ್ತಿದ್ದಾರೆ ಗೊತ್ತಿಲ್ಲ, ನಾನೇ ಅವರನ್ನು ಹುಡುಕಿಕೊಂಡು ಹೋಗುತ್ತೇನೆ. ಸಿಎಂ ಜೊತೆಗೆ ಮಾತಾಡಿದ್ದೇನೆ. ಡಿಸಿ ಅವರ ಜೊತೆಗೆ ಹತ್ತಾರು ಬಾರಿ ಮಾತಾಡಿದ್ದೇನೆ. ಯಾಕೆ ಹೀಗೆ ಮಾಡುತ್ತಿದ್ದಿರಿ ಎಂದು ರಾಜ್ಯ ಸರ್ಕಾರ ತಿಳಿಸಬೇಕು. ಯಾವುದೇ ಕಾರಣಕ್ಕೂ ಯೋಜನೆಯನ್ನು ನಿಲ್ಲಿಸಲ್ಲ‌ ಎಂದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button