Belagavi NewsBelgaum NewsKannada NewsKarnataka NewsNational

*ಬೆಳಗಾವಿಯ ಹೆದ್ದಾರಿ ಕಾಮಗಾರಿ ವಿಳಂಬ: ಗುತ್ತಿಗೆದಾರನಿಗೆ 3.2 ಕೋಟಿ ದಂಡ ಹಾಕಿದ ನಿತಿನ್ ಗಡ್ಕರಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ-ಗೋವಾ ನಡುವೆ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ 748 ಕಾಮಗಾರಿ ವಿಳಂಬ ಆಗಿರುವುದಕ್ಕೆ ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಹೆದ್ದಾರಿ ಕಾಮಗಾರಿಯ ಗುತ್ತಿಗೆ ದಾರರಿಗೆ ದಂಡ ಹಾಕಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರದಿಂದ ಗೋವಾ ಗಡಿಯವರೆಗೆ ನಿರ್ಮಾಣವಾಗುತ್ತಿರುವ ಹೆದ್ದಾರಿ ಕಾಮಗಾರಿ ವಿಳಂಬವಾಗಿರುವುದಕ್ಕೆ ಗುತ್ತಿಗೆದಾರರಿಗೆ ₹3.2 ಕೋಟಿ ದಂಡ ವಿಧಿಸಲಾಗಿದೆ.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಲಿಖಿತ ಉತ್ತರ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ದ್ವಿಪಥದ ಈ ಕಾಮಗಾರಿಯ ಉದ್ದ 52 ಕಿ.ಮೀ ಗುತ್ತಿಗೆದಾರರಿಂದಾಗಿ ಕಾಮಗಾರಿ ವಿಳಂಬವಾಗಿದೆ. ಈ ವರೆಗೆ ಶೇ 72 ಕೆಲಸ ಮುಗಿದಿದೆ. ಮುಂದಿನ ವರ್ಷದ ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಮುಗಿಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಖಾನಾಪುರ ಭಾಗದಲ್ಲಿ 20.8 ಕಿ.ಮೀ ಕಾಮಗಾರಿ ಮುಗಿದಿದೆ. ಇಲ್ಲಿ ಬಳಕೆದಾರರ ಶುಲ್ಕ ಸಂಗ್ರಹಿಸಲಾಗುತ್ತಿದೆ. ಖಾನಾಪುರದಿಂದ ಕರ್ನಾಟಕದ ಗಡಿ ವರೆಗಿನ ಕಾಮಗಾರಿ ಪೂರ್ಣಗೊಳ್ಳದ ಕಾರಣಕ್ಕೆ ಬಳಕೆದಾರರ ಶುಲ್ಕ ಸಂಗ್ರಹಿಸುತ್ತಿಲ್ಲ ಎಂದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button