Kannada NewsKarnataka NewsLatestNationalPolitics

*ದೆಹಲಿ ಸರ್ಕಾರದಿಂದಲೂ ಕರ್ನಾಟಕ ಮಾದರಿ ‘ಗೃಹಲಕ್ಷ್ಮೀ’ ಯೋಜನೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಮಾದರಿಯಲ್ಲಿಯೇ ದೆಹಲಿ ಸರ್ಕಾರ ಕೂಡ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಘೋಷಣೆ ಮಾಡಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಬಜೆಟ್ ಮಂಡನೆಯಾಗಿದ್ದು, ದೆಹಲಿ ಹಣಕಾಸು ಸಚಿವೆ ಆತಿಶಿ, ತಮ್ಮ ಮೊದಲ ಬಜೆಟ್ ಮಂಡಿಸಿದರು. 76,000 ಕೋಟಿ ರೂ. ಬಜೆಟ್ ನಲ್ಲಿ ಶೇ.21ಕ್ಕೂ ಹೆಚ್ಚು ಹಣವನ್ನು ಶಿಕ್ಷಣಕ್ಕೆ ನೀಡಲಾಗಿದೆ.

ಅಲ್ಲದೇ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ ಘೋಷಿಸಲಾಗಿದೆ. ಈ ಯೋಜನೆಯಡಿ 18 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲಾ ಮಹಿಳೆಯರಿಗೂ ಮಾಸಿಕವಾಗಿ 1000 ರೂ ನೆರವು ನೀಡಲಾಗುವುದು. ಏಪ್ರಿಲ್ 1ರಿಂದ ಈ ಯೋಜನೆ ಜಾರಿಗೆ ಬರಲಿದೆ ಎಂದು ಸಚಿವೆ ಆತಿಶಿ ತಿಳಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button