![](https://pragativahini.com/wp-content/uploads/2024/02/bjp-workers-.jpg)
ಪ್ರಗತಿವಾಹಿನಿ ಸುದ್ದಿ : ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ 29 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಂಸದ ಪರ್ವೇಶ್ ವರ್ಮಾ ನವದೆಹಲಿ ಕ್ಷೇತ್ರದಿಂದ, ಮಾಜಿ ಸಿಎಂ ಅರವಿಂದ್ ಕೇಜ್ರವಾಲ್ ವಿರುದ್ಧ ಸ್ಪರ್ಧಿಸುವುದು ಪಕ್ಕಾ ಆಗಿದೆ. ಕಲ್ಯಾಜಿಯಲ್ಲಿ ಸಿಎಂ ಅತಿಶಿ ವಿರುದ್ಧ ಬಿಜೆಪಿ ಹಿರಿಯ ನಾಯಕ ರಮೇಶ್ ಬಿಧುರಿ ಕಣದಲ್ಲಿ ಇದ್ದರೆ, ದುಶ್ಯಂತ್ ಗೌತಮ್ ಅವರು ಕರೋಲ್ ಬಾಗ್ನಿಂದ, ರಾಜೇರಿ ಗಾರ್ಡನ್ ಕ್ಷೇತ್ರದಿಂದ ಮಂಜಿಂದರ್ ಸಿಂಗ್ ಸಿರ್ಸಾ, ಬಿಜ್ಞಾಸನ್ನಿಂದ ಕೈಲಾಶ್ ಗೆಹೋಟ್ ಮತ್ತು ಗಾಂಧಿ ನಗರದಿಂದ ಅರವಿಂದರ್ ಸಿಂಗ್ ಲವಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ದೆಹಲಿಯ ಮಾಜಿ ಸಿಎಂ ಮನೀಶ್ ಸಿಸೋಡಿಯಾ ಅವರ ಜಂಗ್‌ಪುರ ಕ್ಷೇತ್ರದಿಂದ ಬಿಜೆಪಿಯ ಸರ್ದಾರ್ ತರ್ವಿಂದರ್ ಸಿಂಗ್ ಮರ್ವಾ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಈ ಕ್ಷೇತ್ರದಿಂದ ಮಾಜಿ ಮೇಯರ್ ಫರ್ಹಾದ್ ಸೂರಿ ಅವರನ್ನು ಕಣಕ್ಕಿಳಿಸಿದೆ.
ಈಗಾಗಲೇ ಎಎಪಿ ದೆಹಲಿಯ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಹಿಂದೆ 2020ರ ಚುನಾವಣೆಯಲ್ಲಿ ಎಎಪಿ 70ರಲ್ಲಿ 62 ಸ್ಥಾನಗಳನ್ನು ಗೆದ್ದಿತ್ತು. 2015ರ ವಿಧಾನಸಭೆ ಚುನಾವಣೆಯಲ್ಲಿ 70 ರಲ್ಲಿ 67 ಸ್ಥಾನಗಳನ್ನು ಗೆದ್ದು ಪೂರ್ಣ ಬಹುಮತದೊಂದಿಗೆ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ