
ಪ್ರಗತಿವಾಹಿನಿ ಸುದ್ದಿ: ದೆಹಲಿ ಹಾಗೂ ಬಾಂಬೆ ಹೈಕೋರ್ಟ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ.
ದೆಹಲಿ ಹೈಕೋರ್ಟ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದು, ಇ-ಮೇಲ್ ಮೂಲಕ ಸಂದೇಶ ರವಾನಿಸಿ, ಮಧ್ಯಾಹ್ನ 2ಗಂಟೆ ವೇಳೆ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಸಂದೇಶ ರವಾನಿಸಲಾಗಿದೆ.
ಬಾಂಬ್ ಬೆದರಿಕೆ ಬೆನ್ನಲ್ಲೇ ನ್ಯಾಯಮೂರ್ತಿಗಳು, ವಕೀಲರು ಹೈಕೋರ್ಟ್ ನಿಂದ ಹೊರ ಬಂದಿದ್ದಾರೆ. ಹೈಕೋರ್ಟ್ ಗೆ ಪೊಲೀಸರು, ಬಾಂಬ್ ಪತ್ತೆ, ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ದೆಹಲಿ ಹೈಕೋರ್ಟ್ ಬಳಿಕ ಬಾಂಬೆ ಹೈಕೋರ್ಟ್ ಗೂ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ವಿಚಾರಣೆ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಿ ನ್ಯಾಯಾಲಯದ ಆವರಣಗಳನ್ನು ತೆರವು ಮಾಡಿ, ಶೋಧಕಾರ್ಯಾಚರಣೆ ನಡೆಸಲಾಗಿದೆ.