
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ.
ದೆಹಲಿಯ ಜನನಿಬಿಡ ಪ್ರದೇಶ ಕೆಂಪುಕೋಟೆಯ ಮೆಟ್ರೋ ಸ್ಟೇಷನ್ ಬಳಿ ಕಾರು ಸ್ಫೋಟಗೊಂಡಿದ್ದು, ಹಲವರ ದೇಹ ಛಿದ್ರ ಛಿದ್ರವಾಗಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ.
ದೆಹಲಿಯಲ್ಲಿ ಕಾರು ಸ್ಫೋಟದ ಬೆನ್ನಲ್ಲೇ ದೇಶದ ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಪೊಲೀಸರ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕೆಂಪುಕೋಟೆ, ಗ್ರೇಟರ್ ನೊಯ್ಡಾ ಸೇರಿದಂತೆ ಹಲವೆಡೆ ಅನುಮಾನಾಸ್ಪದ ವಾಹನಗಳನ್ನು ತೀವ್ರ ತಪಾಸಣೆ ನಡೆಸಲಾಗಿದೆ.




