
ಹೈ ಅಲರ್ಟ್ ಘೋಷಣೆ
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟ ಪ್ರಕರಣದಲ್ಲಿ 9 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಹಿಂದೆ ಉಗ್ರರ ಕೈವಾಡ ಶಂಕೆ ವ್ಯಕ್ತವಾಗಿದೆ. ಈ ನಡುವೆ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಯುಎಪಿಎ ಅಡಿ ಎಫ್ ಐ ಆರ್ ದಾಖಲಿಸಿದ್ದಾರೆ.
ದೆಹಲಿಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆ ಕಾಯ್ದೆ ಹಾಗೂ ಸ್ಫೋಟಕ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಿದ್ದಾರೆ. ಯುಎಪಿಎ ಸೆಕ್ಷನ್ 16 ಹಾಗೂ 18 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸೆಕ್ಷನ್ ಗಳು ಭಯೋತ್ಪಾದಕ ದಾಳಿಗೆ ಸಂಚು ಹಾಗೂ ಅವುಗಳಿಗೆ ಶಿಕ್ಷೆ ಸಂಬಂಧಿಸಿದ್ದಾಗಿದೆ.
ಇನ್ನು ದೆಹಲಿಯ ಏರ್ ಪೋರ್ಟ್, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ, ಸೂಕ್ಷ್ಮ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.



