ಪ್ರಗತಿವಾಹಿನಿ ಸುದ್ದಿ: ಜೈಲಿನಿಂದ ಬಿಡುಗಡೆಯಾದ ಬಳಿಕ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಸಕ್ರಿಯವಾಗಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು, ‘ಕೇಜ್ರವಾಲ್ ಕಿ ಗ್ಯಾರಂಟಿ’ಯನ್ನು ಘೋಷಣೆ ಮಾಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಈ 10 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ದೇಶದಲ್ಲಿ 24 ಗಂಟೆಗಳ ವಿದ್ಯುತ್ ಅನ್ನು ಒದಗಿಸುತ್ತೇವೆ. ಎಲ್ಲರಿಗೂ ಒಳ್ಳೆಯ ಮತ್ತು ಅತ್ಯುತ್ತಮವಾದ ಉಚಿತ ಶಿಕ್ಷಣದ ವ್ಯವಸ್ಥೆ. ದೇಶಾದ್ಯಂತ ಮೊಹಲ್ಲಾ ಕ್ಲಿನಿಕ್‌ಗಳನ್ನು ಸ್ಥಾಪಿಸಿ, ಜಿಲ್ಲಾ ಆಸ್ಪತ್ರೆಯನ್ನು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸಿ, ಉಚಿತವಾಗಿ ಚಿಕಿತ್ಸೆ ನೀಡುವುದು. ನಾಲ್ಕನೇ ಗ್ಯಾರಂಟಿ ನೇಷನ್ ಫಸ್ಟ್, ಚೀನಾ ನಮ್ಮ ಭೂಮಿಯನ್ನು ಆಕ್ರಮಿಸಿಕೊಂಡಿದೆ. ಚೀನಾ ಆಕ್ರಮಿಸಿಕೊಂಡಿರುವ ದೇಶದ ಎಲ್ಲಾ ಭೂಮಿಯನ್ನು ವಶಪಡಿಸುವುದು. ಅಗ್ನಿವೀರ್ ಯೋಜನೆಯನ್ನು ಹಿಂಪಡೆಯಲಾಗುವುದು. ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ರೈತರಿಗೆ MSP ಒದಗಿಸುವುದು ಸೇರಿದಂತೆ ಒಟ್ಟು 10 ಗ್ಯಾರಂಟಿ ಘೋಷಣೆ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ