Cancer Hospital 2
Beereshwara 33
LaxmiTai 5

*ದೆಹಲಿ ಸಿಎಂ ಕೇಜ್ರಿವಾಲ್ ಮತ್ತೆ ತಿಹಾರ್ ಜೈಲಿಗೆ* 

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜಾಮೀನು ಅವಧಿ ಅಂತ್ಯವಾದ ಹಿನ್ನಲೆ ಅವರು ಇಂದು ಜೈಲಿಗೆ ತೆರಳಲಿದ್ದಾರೆ.

ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಮತ್ತೆ ಜೈಲಿಗೆ ಹೋಗಲಿದ್ದಾರೆ.

Emergency Service

ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯ ಆದೇಶವನ್ನು ರೋಸ್ ಅವೆನ್ಯೂ ಕೋರ್ಟ್ ಜೂನ್ 5ಕ್ಕೆ ಕಾಯ್ದಿಸಿರಿದೆ. ಹೀಗಾಗಿ, ದೆಹಲಿ ಸಿಎಂ ಇಂದು ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ.

ವೈದ್ಯಕೀಯ ಕಾರಣದಿಂದಾಗಿ ಒಂದು ವಾರ ಮಧ್ಯಂತರ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಇಡಿ, ಯಾವುದೇ ವೈದ್ಯಕೀಯ ಪರೀಕ್ಷೆಯ ಅಗತ್ಯವಿದ್ದರೆ ಕೇಜ್ರಿವಾಲ್ ಅವರನ್ನು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ತಿಳಿಸಿದೆ.

Bottom Add3
Bottom Ad 2