Kannada NewsLatestNational

BREAKING: ನಾಲ್ಕು ಕೋರ್ಟ್, ಎರಡು ಸಿಆರ್ ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ

ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೆ ರಾಷ್ಟ್ರ ರಾಜಧಾನಿಯಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ದೆಹಲಿಯ ನಾಲ್ಕು ಕೋರ್ಟ್ ಗಳು, ಎರಡು ಸಿಆರ್ ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

ನಾಲ್ಕು ಕೋರ್ಟ್ ಗಳು, ಸಿಆರ್ ಪಿ ಎಫ್ ನ ಎರಡು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಜೈಶ್ ಉಗ್ರ ಸಂಘಟನೆ ಹೆಸರಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿವೆ.


Related Articles

Back to top button