Politics

*ದೆಹಲಿ ವಿಧಾನಸಭೆ ಫಲಿತಾಂಶ; ತುಷ್ಟೀಕರಣ ರಾಜಕೀಯದ ತಿರಸ್ಕಾರ ಎಂದ ಹೆಚ್.ಡಿ. ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿದ್ದಾರೆ.

ಪ್ರಧಾನಿಗಳಾದ ಮೋದಿ ಅವರು, ಗೃಹ ಸಚಿವರಾದ ಅಮಿತ್ ಶಾ ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆಪಿ ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ದಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button