
ಪ್ರಗತಿವಾಹಿನಿ ಸುದ್ದಿ: ದೆಹಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.
ಜನವರಿ 4ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿತ್ತು. ಇಂದು 29 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದೆ.
ಕರಾವಲ್ ನಗರದಿಂದ ಕಪಿಲ್ ಮಿಶ್ರಾ, ಮೋತಿ ನಗರದಿಂದ ಹರೀಶ್ ಖುರಾನಾ, ಕೊಂಡಲಿ ಕ್ಷೇತ್ರದಿಂದ ಪ್ರಿಯಾಂಕಾ ಗೌತಮ್ ಸೇರಿದಂತೆ ಪ್ರಮುಖರನ್ನು ಕಣಕ್ಕಿಳಿಸಿದೆ. ಈ ಪೈಕಿ ಪ್ರಿಯಾಂಕಾ ಗೌತಮ್ ಇತ್ತೀಚೆಗಷ್ಟೇ ಎಎಪಿ ತೊರೆದು ಬಿಜೆಪಿಗೆ ಸೇರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ