Election NewsNational
*ದೆಹಲಿ ಚುನಾವಣಾ ಫಲಿತಾಂಶ: ಮ್ಯಾಜಿಕ್ ಸಂಖ್ಯೆ ದಾಟಿ ಗೆಲುವಿನತ್ತ ಬಿಜೆಪಿ; ಆಪ್ ಗೆ ಭಾರಿ ಹಿನ್ನಡೆ*
![](https://pragativahini.com/wp-content/uploads/2025/02/delhi-.jpg)
ಪ್ರಗತಿವಾಹಿನಿ ಸುದ್ದಿ: ತೀವ್ರ ಕುತೂಹಲ ಮೂಡಿಸಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಈಗಾಗಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ.
ಸದ್ಯದ ಟ್ರೆಂಡ್ ಪ್ರಕಾರ ಆಡಳಿತಾರೂಢ ಆಮ್ ಆದ್ಮಿ ಪಕ್ಷ ತೀವ್ರ ಹಿನ್ನಡೆ ಸಾಧಿಸಿದೆ. ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ವಿಶೇಷವೆಂದರೆ ಬಿಜೆಪಿ ಮ್ಯಾಜಿಕ್ ಸಂಖ್ಯೆಯನ್ನು ದಾಟಿದ್ದು, 27 ವರ್ಷಗಳ ಬಳಿಕ ದೆಹಲಿಯಲ್ಲಿ ಅಧಿಕರದತ್ತ ದಾಅಪುಗಾಲಿಟ್ಟಿದೆ.
70 ವಿಧಾನಸಭಾ ಕ್ಷೇತ್ರವನ್ನು ಹೊಂದಿರುವ ದೆಹಲಿಯಲ್ಲಿ ಸದ್ಯದ ಟ್ರೆಂಡ್ ಪ್ರಕಾರ ಆಪ್ 19, ಬಿಜೆಪಿ 50 ಹಾಗೂ ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಮುಸ್ಲಿಂ ಪ್ರಾಬಲ್ಯವಿರುವ 7 ಕ್ಷೇತ್ರಗಳಲ್ಲಿಯೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಆಪ್ ಮುಖ್ಯಸ್ಥ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹಿನ್ನಡೆಯಲ್ಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ