![](https://pragativahini.com/wp-content/uploads/2020/02/arvind-kejriwal-.jpg)
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ತೀವ್ರ ಕುತೂಹಲ ಮೂಡಿಸಿದೆ. ಆರಂಭದಿಂದಲೂ ಹಿನ್ನಡೆಅಲ್ಲಿದ್ದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮುನ್ನಡೆ ಸಾಧಿಸಿದ್ದಾರೆ.
ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಅರವಿಂದ್ ಕೇಜ್ರಿವಾಲ್ ಮತ ಎಣಿಕೆ ಆರಂಭದಿಂದಲೂ ಹಿನ್ನಡೆಯಲ್ಲಿದ್ದರು. ಸದ್ಯದ ರೆಂಡ್ ಪ್ರಕಾರ ಮುನ್ನಡೆ ಸಾಧಿಸಿದ್ದಾರೆ. 343 ಮತಗಳ ಅಂತರದಿಂದ ಕೇಜ್ರಿವಾಲ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇನ್ನು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಕೂಡ ಆರಂಭದಿಂದಲೂ ಹಿನ್ನಡೆಯಲ್ಲಿದ್ದರು. ಸದ್ಯದ ಮಾಹಿತಿ ಪ್ರಕಾರ ಅವರು ಕೂಡ ಮುನ್ನಡೆ ಪಡೆದಿದ್ದಾರೆ. ಜಂಗ್ ಪುರ ಕ್ಷೇತ್ರದಲ್ಲಿ ಮನೀಶ್ ಸಿಸೋಡಿಯಾ ಮುನ್ನಡೆ ಕಾಯ್ದುಕೊಂಡಿದ್ದಾರೆ.
ದೆಹಲಿ ಚುನಾವಣಾ ಮತ ಎಣಿಕೆಯ ಸದ್ಯದ ಟ್ರೆಂಡ್ ಪ್ರಕಾರ
ಆಮ್ ಆದ್ಮಿ ಪಕ್ಷ 27 ಕ್ಷೇತ್ರಗಳಲ್ಲಿ ಮುನ್ನಡೆ
ಬಿಜೆಪಿ 47 ಕ್ಷೇತ್ರಗಳಲ್ಲಿ ಮುನ್ನಡೆ
ಕಾಂಗ್ರೆಸ್ 1
ಇತರೆ 0
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ