![](https://pragativahini.com/wp-content/uploads/2025/02/delhi-.jpg)
ಪ್ರಗತಿವಾಹಿನಿ ಸುದ್ದಿ: ದೆಹಲಿ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಫಲಿತಾಂಶ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷ ಆರಂಭದಿಂದ ಹಿನ್ನಡೆಯಲ್ಲಿತ್ತು. ಆದರೆ ಸದ್ಯದ ಮಾಹಿತಿ ಪ್ರಕಾರ ತನ್ನ ಸ್ಥಾನವನ್ನು ಹೆಚ್ಚಿಸಿಕೊಂಡಿದೆ.
ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ ಕಾಂಗ್ರೆಸ್ ಗೆ ಬಿಗ್ ಶಾಕ್ ಆಗಿದೆ. ಕಾಂಗ್ರೆಸ್ ಯಾವುದೇ ಕ್ಷೇತ್ರಗಳಲ್ಲಿ ಖಾತೆ ತೆರೆದಿಲ್ಲ.
ಸದ್ಯದ ಟ್ರೆಂಡ್ ಪ್ರಕಾರ ಆಮ್ ಆದ್ಮಿ ಪಕ್ಷ 30 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ.
ಬಿಜೆಪಿ 40 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಕಾಂಗ್ರೆಸ್ 0 ಹಾಗೂ ಇತರೆ ಪಕ್ಷಗಳು 0
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ