Kannada NewsLatestNationalPolitics

*ಕೆಲವೇ ಹೊತ್ತಿನಲ್ಲಿ ದೆಹಲಿ ಚುನಾವಣೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ನವದೆಹಲಿ : ಭಾರೀ ಕುತೂಹಲ ಮೂಡಿಸಿರುವ ದೆಹಲಿ ವಿಧಾನ ಸಭೆ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್ ಆಗಲಿದೆ.

ಇಂದು ಮಧ್ಯಾಹ್ನ 2 ಗಂಟೆಗೆ ಚುನಾವಣೆ ಆಯೋಗ ಪತ್ರಿಕಾಗೋಷ್ಠಿ ಕರೆದಿದ್ದು, ಚುನಾವಣೆ ದಿನಾಂಕವನ್ನು ಪ್ರಕಟಿಸಲಿದೆ. ಫೆಬ್ರವರಿ ತಿಂಗಳಲ್ಲಿ ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ದಿನಾಂಕ ಘೋಷಣೆಯಾಗಬೇಕಿದೆ.

ಈಗಾಗಲೆ ರಾಜಕೀಯ ಪಕ್ಷಗಳು ಚುನಾವಣೆ ಸಿದ್ಧತೆ ನಡೆಸಿವೆ. ಆಮ್ ಆದ್ಮಿ ಪಕ್ಷ ಅನೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದರೆ, ಕಾಂಗ್ರೆಸ್ ಭರವಸೆಗಳ ಘೋಷಣೆ ಮಾಡಿದೆ. ಬಿಜೆಪಿ ಕೂಡ ಅನೇಕ ಕ್ಷೇತ್ರಗಳ ಅಭ್ಯರ್ಥಿ ಅಂತಿಮಗೊಳಿಸಿದೆ.

ರಾಷ್ಟ್ರ ರಾಜಕಾರಣದಲ್ಲಿ ದೆಹಲಿ ವಿಧಾನಸಭೆ ಚುನಾವಣೆ ಮಹತ್ವ ಪಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button