
ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಬೆನ್ನಲ್ಲೇ ಹರಿಯಾಣ, ಉತ್ತರ ಪ್ರದೇಶದಲ್ಲಿಯೂ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಸುಮಾರು 10 ಸೆಕೆಂಡುಗಳಷ್ಟು ಕಾಲ ಭೂಮಿ ಕಂಪಿಸಿದೆ. ದೆಹಲಿ, ನೊಯ್ಡಾ, ಗಾಜಿಯಾಬಾದ್, ಗುರುಗ್ರಾಮ, ಫರಿದಾಬಾದ್, ರೋಹ್ಟಕ್, ಭಿವಾನಿ, ಬಹದ್ದೂರ್ ಗಢ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದೆ.
ಹರಿಯಾಣದ ಝಜ್ಜರ್ ಪಟ್ಟಣದಿಂದ 10 ಕಿ.ಮೀ ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.