Latest

*ಊರಿಗೆ ಬಂದು ಆತ್ಮಹತ್ಯೆಗೆ ಶರಣಾದ ದೆಹಲಿ ಕರ್ನಾಟಕ ಭವನದ ನೌಕರ*

ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕರ್ನಾಟಕ ಭವನದಲ್ಲಿ ಕೆಲಸ ಮಾಡುತ್ತಿದ್ದ ವಿಜಯನಗರ ಮೂಲದ ನೌಕರ ಊರಿಗೆ ಬಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮಾರುತಿ (35) ಆತ್ಮಹತ್ಯೆಗೆ ಶರಣಾದ ನೌಕರ. ಮಾರುತಿ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಎಂ.ಬಿ.ಅಯ್ಯನಹಳ್ಳಿ ಗ್ರಾಮದವರು.

ಮೂರು ದಿನಗಳ ಹಿಂದೆ ದೆಹಲಿಯಿಂದ ಗ್ರಾಮಕ್ಕೆ ಆಗಮಿಸಿದ್ದ ಮಾರುತಿ, ಪತ್ನಿ ಹಾಗೂ ಮಕ್ಕಳನ್ನು ತವರು ಮನೆಗೆ ಬಿಟ್ಟು ತಾನು ತಂದೆ- ತಾಯಿ ನೋಡಿಕೊಂಡು ಬರುತ್ತೇನೆ ಎಂದು ಸ್ವಗ್ರಾಮಕ್ಕೆ ಬಂದಿದ್ದ. ಮನೆಗೆ ಬಂದ ಮಾರುತಿ ಕಾನಾಹೊಸಳ್ಳಿ ಹೊರವಲಯದಲ್ಲಿ ಹುಣಸೆಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ರೀತಿಯಲ್ಲಿ ಪತ್ತೆಯಾಗಿದ್ದಾನೆ.

Home add -Advt

ಪತ್ನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಕಾನಾಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button