Belagavi NewsBelgaum NewsKannada NewsKarnataka NewsNationalPolitics

*ದೆಹಲಿ ಸಂಸತ್ ಭವನದ ಕಿತ್ತೂರು ಉತ್ಸವ ಅದ್ಧೂರಿಯಾಗಿ ಆಚರಣೆ*

ಪ್ರಗತಿವಾಹಿನಿ ಸುದ್ದಿ: ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಭಕ್ತಿ ಭಾವದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಆಚರಿಸಲಾಯಿತು.

ಕಿತ್ತೂರು ರಾಣಿ ಚೆನ್ನಮ್ಮನವರ 247ನೇ ಜಯಂತ್ಯೋತ್ಸವ ಮತ್ತು 201ನೇ ವಿಜಯೋತ್ಸವ ಸಂಭ್ರಮಾಚರಣೆ ಅಂಗವಾಗಿ ಇಂದು ನವದೆಹಲಿಯ ಸಂಸತ್ ಭವನದ ಆವರಣದ ಪ್ರೇರಣಾ ಸ್ಥಳದಲ್ಲಿ ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

Home add -Advt

ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳವರು ಹಾಗೂ ಹರಿಹರ ಪಂಚಮಸಾಲಿ ಪೀಠದ ಪರಮಪೂಜ್ಯ  ಶ್ರೀ ವಚನಾನಂದ ಸ್ವಾಮೀಜಿಗಳವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ, ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ ಇನ್ನಿತರೆ ಗಣ್ಯರು ಹಾಗೂ ಸಮಾಜದ ಮುಖಂಡರು, ದೆಹಲಿ ಕನ್ನಡಿಗರು ಉಪಸ್ಥಿತರಿದ್ದರು.

Related Articles

Back to top button