ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೋರ್ಟ್ ಆವರಣದಲ್ಲಿ ಗ್ಯಾಂಗ್ ವಾರ್ ನಡೆದಿದ್ದು, ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ವಕೀಲರ ವೇಷ ಧರಿಸಿ ಬಂದಿದ್ದ ಹಂತಕರು ಗ್ಯಾಂಗಸ್ಟರ್ ಜಿತೇಂದ್ರ ಗೋಗಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ.ಫೈರಿಂಗ್ ನಲ್ಲಿ ಗ್ಯಾಂಗ್ ಸ್ಟರ್ ಜಿತೇಂದ್ರ ಗೋಗಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, 6 ಜನ ಗಾಯಗೊಂಡಿದ್ದಾರೆ.
ಗ್ಯಾಂಗ್ ಸ್ಟರ್ ಜಿತೇಂದ್ರ ಗೋಗಿಯನ್ನು ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ವಕೀಲರ ವೇಷ ಧರಿಸಿ ಬಂದ ಹಂತಕರು ಫೈರಿಂಗ್ ನಡೆಸಿದ್ದಾರೆ. ಇಬ್ಬರು ಶೂಟರ್ ಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರ; ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ