Kannada NewsLatestNational

*ವಿವಿಧ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ; ಕಂಗಾಲಾದ ವಿದ್ಯಾರ್ಥಿಗಳು, ಶಿಕ್ಷಕರು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಇದೀಗ ದೆಹಲಿಯ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಇಂದು ದೆಹಲಿಯ ಪ್ರಮುಖ ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿ ಆತಂಕ ಸೃಷ್ಟಿಸಿದ್ದಾರೆ.

ಡಿಪಿಆರ್ ದ್ವಾರಕಾ, ನಜಾಫ್ ಗಢ, ದೆಹಲಿ ಪಬ್ಲಿಕ್ ಸ್ಕೂಲ್, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್, ಸರ್ವೋದಯ ವಿದ್ಯಾಲಯ ಸೇರಿದಂತೆ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳನ್ನು ಹೊರಕಳುಹಿಸಲಾಗಿದೆ. ಶಾಲೆಗಳಿಗೆ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button