ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರಿಗೆ ಇದು ವಿದ್ಯಾರ್ಥಿಯೋರ್ವನ ಕೃತ್ಯ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ 12ನೇ ತರಗತಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ವಿವಿಧ ಶಾಲೆಗಳಿಗೆ ಬಂದಿದ್ದ ಕೊನೆಯ 23 ಬಾಂಬ್ ಬೆದರಿಕೆ ಇ-ಮೇಲ್ ಗಳು 12ನೇ ತರಗತಿಯ ವಿದ್ಯಾರ್ಥಿಯೇ ಕಳುಹಿಸಿದ್ದು. ಆತ ಈ ಹಿಂದೆಯೂ ಬೆದರಿಕೆ ಇ-ಮೇಲ್ ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ.
ಈ ಬಗ್ಗೆದೆಹಲಿ ದಕ್ಷಿಣ ಡಿಸಿಪಿ ಅಂಕಿತ್ ಚೌವ್ಹಾಣ್ ಮಾಹಿತಿ ನೀಡಿದ್ದಾರೆ. ಈ ನಡುವೆ ದೆಹಲಿಯ ಎಲ್ಲಾ ಶಾಲೆಗಳಲ್ಲಿಯೂ ಇಂತಹ ಬಿಕ್ಕಟ್ತು ಎದುರಿಸಲು ಪೊಲೀಸರು ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿಗಳಿಗೆ ತರಬೇತಿ ನೀಡಿದ್ದಾಗಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ