
ಪ್ರಗತಿವಾಹಿನಿ ಸುದ್ದಿ: ನವದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಾಟಕೀಯ ಬೆಳವಣಿಗೆ ನಡೆದಿದೆ. ಶೃಂಗಸಭೆಯ ವೇದಿಕೆಗೆ ನುಗ್ಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಶರ್ಟ್ ಬಿಚ್ಚಿ ಏಕಾಏಕಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ದೆಹಲಿಯ ಭಾರತ್ ಮಂಟಪ್ ನಲ್ಲಿ ನಡೆಯುತ್ತಿರುವ ಎಐ ಶೃಂಗ ಸಭೆಯಲ್ಲಿ ದೇಶ-ವಿದೇಶಗಳ ಗಣ್ಯಾತಿಗಣ್ಯರು ಹೈಡ್ರಾಮಾಕ್ಕೆ ಸಾಕ್ಷಿಯಾದರು. ಶೃಂಗ ಸಭೆಯ ವೇದಿಕೆಗೆ ಧಾವಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಟೀ ಶರ್ಟ್ ಬಿಚ್ಚಿ ಅರೆಬೆತ್ತಲಾಗಿ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಡೊನಾಲ್ಡ್ ಟ್ರ<ಪ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಮೆರಿಕ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಮೂಲಕ ಕೇಂದ್ರ ಸರ್ಕಾರ ದೇಶವನ್ನು ಮಾರಾಟ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ತಕ್ಷಣ ಸ್ಥಳಕ್ಕಾಗಮಿಸಿದ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು.


