ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸ್ಥಳದಲ್ಲಿದ್ದ ವಾಹನಗಳು ಸಂಪೂರ್ಣ ಜಖಂಗೊಂಡಿವೆ.
ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರೋಡ್ ನಲ್ಲಿರುವ ಇರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದೆ. ಸ್ಥಳಕ್ಕೆ ವಿಶೇಷ ಪೊಲೀಸ್ ಪಡೆಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆ ಬೆನ್ನಲ್ಲೇ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿಗೆ ಭದ್ರತೆ ಕಲ್ಪಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ