Kannada NewsLatestNational

*ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತ*: *ಇಬ್ಬರು ಸಾವು*: *ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ*

ಪ್ರಗತಿವಾಹಿನಿ ಸುದ್ದಿ: ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿ ಸಿಲುಕಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಲವರು ಗಾಯಗೊಂಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇಂದು ಬೆಳಿಗ್ಗೆ ಈ ದುರಂತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಣಾ ತಂಡಗಳು ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ದೆಹಲಿಯ ಜನನಿಬಿಡ ಚಾವರಿ ಬಜಾರ್ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕಟ್ಟಡದ ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

ಚಾವರಿ ಬಜಾರ್ ಮೆಟ್ರೋ ನಿಲ್ದಾಣದ ಸಮೀಪವಿರುವ ಗಲಿ ಸಿತಾರಾ ಪ್ರದೇಶದಲ್ಲಿ ಬೆಳಗ್ಗೆ ಸುಮಾರು 9.50ಕ್ಕೆ ಈ ಘಟನೆ ಸಂಭವಿಸಿದೆ. ನಿರ್ಮಾಣ ಕಾರ್ಯ ನಡೆಯುತ್ತಿದ್ದ ಮೂರು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಕಟ್ಟಡ ಕುಸಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಗ್ನಿಶಾಮಕ ಸಿಬ್ಬಂದಿ, ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಅವಶೇಷಗಳಡಿ ಯಾರಾದರೂ ಸಿಲುಕಿದ್ದಾರೆಯೇ ಎಂಬುದನ್ನು ಪರಿಶೀಲಿಸುತ್ತಿವೆ. ನೀರಿನ ಟ್ಯಾಂಕರ್‌ಗಳು ಮತ್ತು ರಕ್ಷಣಾ ವಾಹನಗಳನ್ನೂ ಸ್ಥಳಕ್ಕೆ ಕಳುಹಿಸಲಾಗಿದೆ. ಹಿರಿಯ ಅಧಿಕಾರಿಗಳು ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

Related Articles

Back to top button